ಬಾಗಲಕೋಟೆ: ಅಧಿಕ ರಕ್ತದೊತ್ತಡ ಹೃದ್ರೋಗ ಸೇರಿದಂತೆ ದೀರ್ಘಕಾಲ ಕಾಡುವ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಗಳಿಗೆ ಸದ್ದಿಲ್ಲದೇ ದಾರಿ ಮಾಡಿಕೊಡುತ್ತದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ ಡಿ. ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾ ಘಟಕ, ಎನ್‌ಸಿಡಿ ಘಟಕ, ತಾಲ್ಲೂಕು ಆರೋಗ್ಯ ಕಚೇರಿ ಹಾಗೂ ಡಾ.ಸುಭಾಸ ಪಾಟೀಲ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಸಹಯೋಗದಲ್ಲಿ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮದಡಿ ಶನಿವಾರ ನಡೆದ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಮತ್ತು ರಕ್ತದೊತ್ತಡ ಕುರಿತು ಅರಿವು ಮತ್ತು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಮನುಷ್ಯನ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ರಕ್ತದೊತ್ತಡ ನಿರ್ವಹಿಸುವುದು ಅಗತ್ಯವಾಗಿದೆ. ಕಡಿಮೆ ಉಪ್ಪು ಸೇವನೆಯಿಂದ ರಕ್ತದೊತ್ತಡ ನಿಯಂತ್ರಿಸಬಹುದು. ಹೆಚ್ಚು ಹಣ್ಣು ಮತ್ತು ತರಕಾರಿ ಸೇವಿಸಬೇಕು’ ಎಂದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೆಯನ್ನವರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸುವರ್ಣ ಕುಲಕರ್ಣಿ, ಡಿಎಲ್ಒ ಎಸ್.ಸಿ.ಪಾಟೀಲ, ಡಿಎಚ್ಇಒ ಶಶಿಕಲಾ, ಎನ್‌ಸಿಡಿ ಕಾರ್ಯಕ್ರಮ ಸಂಯೋಜಕ ಡಾ.ಅಜೀತ ಪಾಟೀಲ, ಜಿಲ್ಲಾ ಆರ್ಥಿಕ ಮತ್ತು ಲಾಜಿಸ್ಟಿಕ್ಸ್ ಸಲಹೆಗಾರ ಎಂ.ವಿ.ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.