ಬೀಳಗಿ: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲ್ಲೂಕಾ ಘಟಕ ಬೃಹತ್ತ ಪ್ರತಿಭಟನೆ ಕೈಗೊಂಡು ತಹಶೀಲ್ದಾರಗೆ ಮನವಿ ಸಲ್ಲಿಸಿದರು.
ಡಿ.ಎಸ್.ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ ಮಾತನಾಡಿ, ಈ ಘಟನೆಯು ಸಮಸ್ತ ಭಾರತೀಯರಿಗೆ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಬುಡಮೇಲು ಮಾಡುವ ಬಹುದೊಡ್ಡ ಷಡ್ಯಂತರವಾಗಿದೆ. ಧಾರ್ಮಿಕ ಮೂಲಭೂತವಾದಿ ಮತ್ತು ಅಂಬೇಡ್ಕರವರ ಸಿದ್ಧಾಂತದ ಮೇಲೆ ನಡೆದ ಹಲ್ಲೆಯಾಗಿದೆ. ವಕೀಲನ ದುಷ್ಕೃತ್ಯವನ್ನು ನ್ಯಾಯಮೂರ್ತಿ ಬಿ. ಆರ್. ಗವಾಯಿಯವರು ಕ್ಷಮಿಸಬಹುದು ಆದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸಲು ಬಯಸುವ ಯಾರೂ ಕ್ಷಮಿಸಲಾರರು ಎಂದರು.
ತಾಲ್ಲೂಕಾ ಅಧ್ಯಕ್ಷ ಪ್ರಕಾಶ ಕಾತರಕಿ ಮಾತನಾಡಿ, ಆರೋಪಿ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ರಾಷ್ಟ್ರಪತಿಗಳು ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು, ಇಲ್ಲದಿದ್ದರೆ ಮುಂಬರುವ ,ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡುವುದಾಗಿ ಎಚ್ಚರಿಕೆ ನೀಡಿದರು.
ರಮೇಶ ಅನಗವಾಡಿ, ಕಾಶಿಂಅಲಿ ಗೋಠೆ, ಯಲ್ಲಪ್ಪ ಶಿರಗುಪ್ಪಿ ,ಸಿಕಂದರ ಹುದ್ದಾರ, ಇಸ್ಮಾಯಿಲ್ ನಿಂಬಾಳ್ಕರ, ಹುಸೇನಸಾಬ ಬಡೆಪ್ಪನ್ನವರ, ಚಿನ್ನಪ್ಪ ಬಂಡಿವಡ್ಡರ, ಶಿವಪ್ಪ ಚಲವಾದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.