ಬಾಗಲಕೋಟೆ: ಸಮೀಪ ನೀರಲಕೇರಿ ಹತ್ತಿರ ಸಾರಿಗೆ ಸಂಸ್ಥೆಯ ಗುರುವಾರ ಸಂಜೆ ನಡೆದ ಅವಘಡದಲ್ಲಿ ಬಸ್ ಹೊಲಕ್ಕೆ ಉರುಳಿ ಬಿದ್ದಿದೆ. ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬಾಗಲಕೋಟೆಯಿಂದ ಗದುಗಿಗೆ ಹೊರಟಿದ್ದ ಬಸ್‌ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಬೇರಿಂಗ್ ಕಟ್ ಆಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಉರುಳಿದೆ ಎಂದು ಅಲ್ಲಿದ್ದ ಪ್ರಯಾಣಿಕರು ತಿಳಿಸಿದರು.
ನೀರಲಕೇರಿ ಮಾರ್ಗದ ರಸ್ತೆ ಬಹಳಷ್ಟು ಹಾಳಾಗಿದೆ. ದುರಸ್ತಿ ಮಾಡಬೇಕು ಎಂದು ಕೆಲ ತಿಂಗಳ ಹಿಂದೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ರಸ್ತೆ ದುರಸ್ತಿಯಾಗಿಲ್ಲ ಎಂದು ಜನರು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.