
ಕೆರೂರ: ಸಮೀಪದ ಬೆಳಿಗಂಟಿ ಗ್ರಾಮಕ್ಕೆ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಬಸ್ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮಸ್ಥರು ಬಸ್ ಅನ್ನು ತಳಿರು-ತೋರಣಗಳಿಂದ ಶೃಂಗರಿಸಿ ವಿಶೇಷ ಪೂಜೆ ಸಲ್ಲಿಸಿದರು.
ಸುಮಾರು ವರ್ಷಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಸಮಸ್ಯೆಯಾಗಿತ್ತು, ನಿತ್ಯ ನಡೆದುಕೊಂಡು ಹೋಗುವುದು, ಬರುವುದು ಗ್ರಾಮಸ್ಥರಿಗೆ ಕಷ್ಟುವಾಗಿತ್ತು.
ಗ್ರಾಮಸ್ಥರು ಸಮಸ್ಯೆಯನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಗಮನಕ್ಕೆ ತಂದಾಗ ಅವರು, ಕೆಎಸ್ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಗ್ರಾಮಕ್ಕೆ ಬಸ್ ಸಂಚಾರ ಪ್ರಾರಂಭಿಸಿದ್ದಾರೆ.ಇದರಿಂದ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸುರೇಶ ಪೂಜೇರಿ ತಿಳಿಸಿದ್ದಾರೆ.
ಬೆಳಿಗ್ಗೆ 8ಗಂಟೆಗೆ ಕೆರೂರ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭಗೊಳ್ಳಲಿದೆ. ಸಂಜೆ 5 ಗಂಟೆಗೆ ಹೊರಡಲಿದೆ ಎಂದು ಸ್ಥಳೀಯ ಕೆಎಸ್‌ಆರ್‌ಟಿಸಿ ನಿರ್ವಾಹಕ ತಿಳಿಸಿದ್ದಾರೆ.
ಬಸ್ ಸಂಚಾರ ಸಮಯದ ಬದಲಾವಣೆ: ಬೆಳಿಗ್ಗೆ 8 ಗಂಟೆಗೆ ಆರಂಭವಾಗುವ ಬದಲು 8.30ಕ್ಕೆ ಬಸ್ ಪ್ರಾರಂಭವಾದರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ, ನಾಡಕಚೇರಿ ಕಾರ್ಯಾಲಯಕ್ಕೆ ಹೊಗಲು ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.