ಬಾಗಲಕೋಟೆ: ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘಕ್ಕೆ 2025-26ನೇ ಸಾಲಿನಿಂದ ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಆರಂಭಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮತಿ ನೀಡಿದೆ.
ಬಿಎನ್‌ವೈಸ್ ಪದವಿಯ ಮೊದಲ ವರ್ಷಕ್ಕೆ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅನುಮತಿ ದೊರೆತಿದೆ. ಗದ್ದನಕೇರಿಯಲ್ಲಿರುವ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ನೂತನ ಸುಸಜ್ಜಿತ ಕಟ್ಟಡದಲ್ಲಿ ಕಾಲೇಜು ಪ್ರಾರಂಭಿಸಲಾಗುವುದು ಎಂದು ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.