ADVERTISEMENT

ಜಾತಿ ಕಾಲಂನಲ್ಲಿ ‘ಕಮ್ಮಾರ’ ನಮೂದಿಸಿ: ಬಸವರಾಜ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 6:38 IST
Last Updated 21 ಸೆಪ್ಟೆಂಬರ್ 2025, 6:38 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬಾಗಲಕೋಟೆ: ಸಾಮಾಜಿಕ, ಶೈಕ್ಷಣಿಕ ಗಣತಿ ಆರಂಭಗೊಳ್ಳಲಿದ್ದು, ಧರ್ಮ ಕಾಲಂನಲ್ಲಿ ಹಿಂದೂ ಜಾತಿ ಕಮ್ಮಾರ, ಉಪಜಾತಿ ಕಂಬಾರ ಎಂದು ಬರೆಯಿಸಬೇಕು ಎಂದು ಜಿಲ್ಲಾ ಕಮ್ಮಾರ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಬಸವರಾಜ ಕಮ್ಮಾರ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣತಿಗೆ ಅಧಿಕಾರಿಗಳು ಬಂದಾಗ ಗೊಂದಲಕ್ಕೆ ಒಳಗಾಗದೇ ಸಂಘದ ನಿರ್ಧಾರ ಪ್ರಕಾರ ಸಮರ್ಪಕ ಮಾಹಿತಿ ನೀಡಬೇಕು ಎಂದರು.

ADVERTISEMENT

ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ಕಮ್ಮಾರ ಎಂದು ನಮೂದಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಅಧ್ಯಕ್ಷರನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಕಮ್ಮಾರ ಸಮುದಾಯವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ನಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಸೌಲಭ್ಯಗಳು ಸರಿಯಾಗಿ ಸಮುದಾಯದ ಜನರಿಗಾಗಿ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಿದರು.

ಯಲ್ಲಪ್ಪ ಕಮ್ಮಾರ, ಬಸವರಾಜ, ಗೂಳಪ್ಪ ಕಮ್ಮಾರ, ಜ್ಯೋತಿಬಾ ಕಮ್ಮಾರ, ರಮೇಶ ಕಮ್ಮಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.