ಬಾಗಲಕೋಟೆ: ಜಿಲ್ಲೆಯಲ್ಲಿ ನೆರೆ ಹಾಗೂ ಮಳೆ ಹಾನಿ ಅಧ್ಯಯನ ಕ್ಕಾಗಿ ಕೇಂದ್ರ ಸರಕಾರದ ಅಧಿಕಾರಿಗಳ ತಂಡ ಬಾದಾಮಿ ತಾಲೂಕಿನಲ್ಲಿ ಮಂಗಳವಾರ ಪ್ರವಾಸ ಕೈಗೊಂಡಿತು.
ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಸೇತುವೆ, ಹಳೆಯ ಸೇತುವೆ ಬಳಿ ನೆರೆ, ಮಳೆಯಿಂದಾದ ಹಾನಿ ಯನ್ನು ಸದಸ್ಯರು ವೀಕ್ಷಿಸಿದರು.
2 ಎಕರೆ ಹೆಸರು ಬೆಳೆದು ಹಾನಿಗೀಡಾದ ಗ್ರಾಮದ ಹೊಳೆಬಸಪ್ಪ ಅವರಿಂದ ತಂಡದ ಸದಸ್ಯರು ನೆರೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಹೆಬ್ಬಳ್ಳಿಗೆ ಭೇಟಿ ನೀಡಿದ ತಂಡ ಹಾಳಾಗಿರುವ ಗೋವಿನ ಜೋಳ, ಕಬ್ಬು ಬೆಳೆ ವೀಕ್ಷಿಸಿತು.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀಕ್ಷಕ ಎಂಜಿನಿಯರ್ ಸದಾನಂದ ಬಾಬು ಹಾಗೂ ಗ್ರಾಮೀಣಾಭಿವೃದ್ದಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ.ರಾಜವೇದಿ ತಂಡದ ನೇತೃತ್ವ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕ್ಯಾ.ಡಾ.ರಾಜೇಂದ್ರ, ಜಿಪಂ ಸಿಇಒ ಟಿ.ಭೂಬಾಲನ್, ಎಸ್ ಪಿ ಲೋಕೇಶ್ ಜಗಲಾಸರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.