ADVERTISEMENT

ಹುನಗುಂದ: ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ಆರಂಭಿಸಿದ ರೈತರು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 7:12 IST
Last Updated 6 ಫೆಬ್ರುವರಿ 2021, 7:12 IST
   

ಬಾಗಲಕೋಟೆ: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಹಿನ್ನೆಲೆಯಲ್ಲಿ ಹುನಗುಂದ ಪಟ್ಟಣದಲ್ಲಿ ಶನಿವಾರ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ಆರಂಭಿಸಲಾಗಿದೆ.

ಹುನಗುಂದ ಪಟ್ಟಣದ ಹೊರ ವಲಯದಲ್ಲಿರುವ ಚಿತ್ರದುರ್ಗ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಜಮಾಯಿಸಿರುವ ರೈತರು ಪ್ರತಿಭಟನೆ ಆರಂಭಿಸಿದ್ದಾರೆ.

ಕೇಂದ್ರದ ವಿರುದ್ಧ ಘೋಷಣೆಗಳ ಕೂಗುತ್ತಾ ವಿವಾದಾತ್ಮಕ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದ್ದಾರೆ.

ADVERTISEMENT

ರಸ್ತೆಯಲ್ಲಿ ಕುಳಿತು ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿವೆ. ಸಂಚಾರ ದಟ್ಟಣೆ ಉಂಟಾಗಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಹುನಗುಂದ ಠಾಣೆ ಪೊಲೀಸರು ಸೇರಿದಂತೆ ಜಿಲ್ಲೆಯ ಬೇರೆ ಬೇರೆ ಕಡೆಯಿಂದ ಪೊಲೀಸರನ್ನು ಕರೆಸಿ ಹೆದ್ದಾರಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.