ADVERTISEMENT

ಚಿಕ್ಕಪಡಸಲಗಿ: ಕುಡಿದ ಅಮಲಿನಲ್ಲಿ ಕೃಷ್ಣಾ ನದಿಗೆ ಹಾರಿದ್ದ ಯುವಕನ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 13:03 IST
Last Updated 18 ಜೂನ್ 2020, 13:03 IST

ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಗುರುವಾರ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ಮೀನುಗಾರರು ರಕ್ಷಣೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದ ಹನುಮಂತ ತಳವಾರ (28) ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ನ ಸೇತುವೆ ಮೇಲಿನಿಂದ ಕೃಷ್ಣಾ ನದಿಗೆ ಹಾರಿದ್ದನು.

ಈ ವೇಳೆ ನದಿಯಲ್ಲಿ ತೆಪ್ಪ ಬಳಸಿ ಮೀನು ಹಿಡಿಯುತ್ತಿದ್ದ ಮೀನುಗಾರರು ಹನುಮಂತ ಅವರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ADVERTISEMENT

ಈ ಬಗ್ಗೆ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.