ADVERTISEMENT

‘ಅಂಗವಿಕಲ ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ’

​ಪ್ರಜಾವಾಣಿ ವಾರ್ತೆ
Published 8 ಮೇ 2025, 14:37 IST
Last Updated 8 ಮೇ 2025, 14:37 IST
ಗುಳೇದಗುಡ್ಡ ವಲಯದ ಅಂಗವಿಕಲ ಮಕ್ಕಳ ಪಾಲಕರ ತರಬೇತಿಯನ್ನು ಕಾರ್ಯಾಗಾರದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ ಮಾತನಾಡಿದರು
ಗುಳೇದಗುಡ್ಡ ವಲಯದ ಅಂಗವಿಕಲ ಮಕ್ಕಳ ಪಾಲಕರ ತರಬೇತಿಯನ್ನು ಕಾರ್ಯಾಗಾರದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ ಮಾತನಾಡಿದರು   

ಗುಳೇದಗುಡ್ಡ: ಅಂಗವಿಕಲ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಪಾಲಕರ ಪಾತ್ರ ಮಹತ್ವದ್ದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ ಹೇಳಿದರು.

ಪಟ್ಟಣದ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲೆ ವಿಭಾಗದಲ್ಲಿ) ಗುರುವಾರ ಹಮ್ಮಿಕೊಂಡಿದ್ದ ಗುಳೇದಗುಡ್ಡ ವಲಯದ ಅಂಗವಿಕಲ ಮಕ್ಕಳ ಪಾಲಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಸಾರಿಗೆ, ಬೆಂಗಾವಲು, ಹೆಣ್ಣುಮಕ್ಕಳ ಪ್ರೋತ್ಸಾಹಧನ ಭತ್ಯೆ, ಅಂಧರಿಗೆ ಓದುಗರ ಭತ್ಯೆ ಹಾಗೂ ಫಿಸಿಯೋಥೆರಪಿ ಸೇವೆ, ಅರ್ಹ ಅಂಗವಿಕಲ ಮಕ್ಕಳಿಗೆ ಸಾಧನ ಸಲಕರಣೆ ವಿತರಿಸಲಾಗುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ದಾಖಲಿಸಿ ದಿನನಿತ್ಯ ಶಾಲೆಗೆ ಕಳುಹಿಸಿ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯ ಎಂ.ಸಿ. ಮುದಕವಿ ಮಾತನಾಡಿ, ‘ಅಂಗವಿಕಲ ಮಕ್ಕಳಿಗೆ ಎಸ್.ಎಸ್.ಎಲ್.ಸಿ. ಪರಿಕ್ಷೆಯಲ್ಲಿ ವಿಷಯ ವಿನಾಯ್ತಿ ಇದ್ದು, ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಬೇಕು’ ಎಂದು ಹೇಳಿದರು.

ಸಮನ್ವಯ ಶಿಕ್ಷಣ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಲಾಯಿತು. ಎನ್.ಡಿ.ಬೀಳಗಿ, ಎಸ್.ಎಸ್.ಚೌಕದ, ಎಚ್.ಆರ್.ಕಡಿವಾಲ,ವಿ.ಎಚ್. ಮಡಿವಾಳರ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ರಾಮಚಂದ್ರ ಬಾಪಟ, ರಾಜಶೇಖರ ಹುನಗುಂದ, ಜಗದೀಶ ಬುಳ್ಳಾ, ಭಾಗೀರಥಿ ಆಲೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.