ADVERTISEMENT

ಬಾಗಲಕೋಟೆ | ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ: ಪಾಟೀಲ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 6:03 IST
Last Updated 21 ಜನವರಿ 2026, 6:03 IST
ಬಾಗಲಕೋಟೆಯಲ್ಲಿ ಮಂಗಳವಾರ ನಡೆದ ಹೇಮರಡ್ಡಿ ಮಲ್ಲಮ್ಮ ಸಭಾಭವನ ಉದ್ಘಾಟನಾ ಕಾರ್ಯಕ್ರಮವನ್ನು ಸಚಿವ ಎಚ್‌.ಕೆ. ಪಾಟೀಲ ಉದ್ಘಾಟಿಸಿದರು
ಬಾಗಲಕೋಟೆಯಲ್ಲಿ ಮಂಗಳವಾರ ನಡೆದ ಹೇಮರಡ್ಡಿ ಮಲ್ಲಮ್ಮ ಸಭಾಭವನ ಉದ್ಘಾಟನಾ ಕಾರ್ಯಕ್ರಮವನ್ನು ಸಚಿವ ಎಚ್‌.ಕೆ. ಪಾಟೀಲ ಉದ್ಘಾಟಿಸಿದರು   

ಬಾಗಲಕೋಟೆ: ಎಲ್ಲ ಸಮುದಾಯದವರೊಂದಿಗೆ ಹೊಂದಿಕೊಂಡು ಹೋಗುವ ಸಮಾಜವೆಂದರೆ, ಅದು ರಡ್ಡಿ ಸಮುದಾಯ. ಸಮುದಾಯದ ಅಭಿವೃದ್ಧಿ ಜೊತೆಗೆ ಸಮಾಜದ ಅಭಿವೃದ್ಧಿಗೂ ಶ್ರಮಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ನವನಗರದ ಕೆಐಎಡಿಬಿ ನಿವೇಶನದಲ್ಲಿ ಹೇಮ ವೇಮ ಸಂಸ್ಥೆಯಿಂದ ನಿರ್ಮಿಸಿರುವ ಹೇಮರಡ್ಡಿ ಮಲ್ಲಮ್ಮ ಸಭಾಭವನ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವೇಮನ ಜಯಂತಿ, ಮಲ್ಲಮ್ಮನ ಜಯಂತಿ ಮಾಡುವಲ್ಲಿ ನಮ್ಮ ಸರ್ಕಾರದ ಕೊಡುಗೆ ಇದೆ. ದಾನಿಗಳು ಸಹಾಯ ಮಾಡಿದ್ದರಿಂದ ಸಮುದಾಯ ಭವನ ತಲೆ ಎತ್ತಿದೆ ಎಂದರು.

ಮಾಜಿ ಸಚಿವ ಎಸ್‌.ಆರ್. ಪಾಟೀಲ ಮಾತನಾಡಿ, ಸಾಂಸ್ಕೃತಿಕ, ಶೈಕ್ಷಣಿಕ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಸಭಾಭವನ ವೇದಿಕೆಯಾಗಲಿ.  ಸಮಾಜಮುಖಿ ಕಾರ್ಯಕ್ರಮಗಳಿಗೂ ವೇದಿಕೆಯಾಗಬೇಕು ಎಂದರು.

ADVERTISEMENT

ಸಚಿವ ರಾಮಲಿಂಗಾ ರಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಮಾತನಾಡಿದರು. ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸುನೀಲಗೌಡ ಪಾಟೀಲ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಸಿ.ಆರ್. ಸೋರಗಾಂವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.