
ಬಾಗಲಕೋಟೆ: ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜಯಂತಿಯನ್ನು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮಾತನಾಡಿ, ‘ಇಂದಿರಾ ಗಾಂಧಿ ಭಾರತದ ಮೊದಲ ಮಹಿಳಾ ಪ್ರಧಾನಿ ಆಗಿದ್ದರು. ಭಾರತವನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡಲು ಆರ್ಥಿಕ ಸುಧಾರಣೆ ತಂದರು. ಹಸಿರು ಕ್ರಾಂತಿ ಹಾಗೂ ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದರು. ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ಗೆಲುವು ಸಾಧಿಸಿ ಬಾಂಗ್ಲಾ ದೇಶದ ರಚನೆಗೆ ಕಾರಣರಾದರು’ ಎಂದರು.
ಕಾಂಗ್ರೆಸ್ ಮುಖಂಡ ಪ್ರಕಾಶ ತಪ್ಪಶೆಟ್ಟಿ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಅಧ್ಯಕ್ಷ ರಾಜು ಮನ್ನಿಕೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ, ಈರಣ್ಣ ಹುಂಡೆಕರ, ಪ್ರಭುದೇವ ರುದ್ರಾಕ್ಷಿ, ಶ್ರವಣ ಖಾತೆದಾರ, ಅಭಿಷೇಕ ತಳ್ಳಿಕೇರಿ, ಪ್ರಭು ಹಳ್ಳೂರ, ರಮೇಶ ಸಣದಿ, ಗುರುನಾಥ ಮ್ಯಾಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.