ADVERTISEMENT

ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 10:24 IST
Last Updated 10 ನವೆಂಬರ್ 2020, 10:24 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬಾಗಲಕೋಟೆ: ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಶಿರಾದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್. ನಗರದಲ್ಲಿ ಒಳ್ಳೆಯ ಫೈಟ್ ಕೊಡ್ತಿವಿ ಎಂದುಕೊಂಡಿದ್ವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕೊಟ್ಟ ತೀರ್ಪು ಒಪ್ಪಿಕೊಳ್ಳಬೇಕಾಗುತ್ತೇ. ಜನರು ಕೊಟ್ಟ ತೀರ್ಪು ನಾವು ಒಪ್ಪಿಕೊಂಡಿದ್ದೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಲ್ಲಿರೋರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸೋದು ಜವಾಬ್ದಾರಿ ಹೊಂದಿರುತ್ತಾರೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಆದರೂ ತೀರ್ಪು ಒಪ್ಪಿಕೊಳ್ಳಲೇಬೇಕು, ಹಾಗಾಗಿ ಒಪ್ಪಿಕೊಂಡಿದ್ದೇವೆ’ ಎಂದರು.

ಬೈ ಎಲೆಕ್ಷನ್ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ನೀಡಿದ್ದ ಹೇಳಿಕೆಯನ್ನು ಪುನರುಚ್ಚರಿಸಿದ ಸಿದ್ದರಾಮಯ್ಯ, ಈಗಲೂ ನನ್ನ ಹೇಳಿಕೆಗೆ ಬದ್ಧನಿದ್ದೇನೆ. ನನಗಿರುವ ಮಾಹಿತಿ ಪ್ರಕಾರ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿತಾರೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.