ADVERTISEMENT

ಮತಗಳ್ಳರೇ ಅಧಿಕಾರ ಬಿಡಿ: ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 4:59 IST
Last Updated 17 ಆಗಸ್ಟ್ 2025, 4:59 IST
ಮತಗಳ್ಳರೇ ಅಧಿಕಾರ ಬಿಡಿ ಎಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡರು ಶುಕ್ರವಾರ ಬಾಗಲಕೋಟೆಯಲ್ಲಿ ಪ್ರತಿಭಟನೆ ಮಾಡಿದರು
ಮತಗಳ್ಳರೇ ಅಧಿಕಾರ ಬಿಡಿ ಎಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡರು ಶುಕ್ರವಾರ ಬಾಗಲಕೋಟೆಯಲ್ಲಿ ಪ್ರತಿಭಟನೆ ಮಾಡಿದರು   

ಬಾಗಲಕೋಟೆ: ರಾಷ್ಟ್ರ ಧ್ವಜ ಹಿಡಿದುಕೊಂಡು ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಮತಗಳ್ಳರೇ ಅಧಿಕಾರ ಬಿಡಿ ಎಂಬ ಘೋಷಣೆಗಳನ್ನು ಕೂಗುತ್ತಾ ಶುಕ್ರವಾರ ಕಾಂಗ್ರೆಸ್‌ ಮುಖಂಡರು ಬಾಗಲಕೋಟೆಯಲ್ಲಿ ಪ್ರತಿಭಟನೆ ಮಾಡಿದರು.

ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮತಗಳ್ಳತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ, ಜಿಲ್ಲಾ ಪ್ರಚಾರ ಸಮೀತಿ ಅಧ್ಯಕ್ಷ ನಾಗರಾಜ ಹದ್ದಿ, ಗ್ರಾಮೀಣ ಬ್ಲಾಕ್ ಸಮಿತಿ ಅಧ್ಯಕ್ಷ ಎಸ್.ಎಂ. ರಾಂಪುರ, ನಗರಸಭೆ ಸದಸ್ಯೆ ಮಂಜುಳಾ ಭೂಸಾರಿ, ಚಂದ್ರಶೇಖರ ರಾಠೋಡ, ರಮೇಶ ಬದ್ನೂರ, ಎಸ್.ಸಿ. ಘಟಕದ ಜಿಲ್ಲಾ ಅಧ್ಯಕ್ಷ ರಾಜು ಮನ್ನಿಕೇರಿ ಮತ್ತಿತರರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.