ಬಾಗಲಕೋಟೆ:ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ಸೋಂಕಿಗೆ ಇಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ ತಾಲ್ಲೂಕಿನ ಕೇಸನೂರು ಗ್ರಾಮದ 60 ವರ್ಷದ ವೃದ್ಧೆ ಮತ್ತು ಬಾಗಲಕೋಟೆ ನಗರದ ಹಳೇಪೇಟೆ ನಿವಾಸಿ 62 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ.
ಬಾಗಲಕೋಟೆ ನಗರದಲ್ಲಿ ಮೃತಪಟ್ಟ 42 ವರ್ಷದ ಶಂಕಿತ ವ್ಯಕ್ತಿಯ ಮಾದರಿಗಳನ್ನು ಬೆಂಗಳೂರಿಗೆ ಪರೀಕ್ಷೆಗೆ ಕಳುಹಿಸಲಾಗಿದೆ.
ಮೂವರು ಜ್ವರ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಪ್ರಕಾಶ್ ಬಿರಾದಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.