ADVERTISEMENT

ಬಾಗಲಕೋಟೆ: ಕೋವಿಡ್‌ನಿಂದ 122 ಮಂದಿ ಗುಣಮುಖ, 138 ಹೊಸ ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2020, 15:19 IST
Last Updated 22 ಆಗಸ್ಟ್ 2020, 15:19 IST
   

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್‍ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ‌. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿಒಟ್ಟು 4151 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ 16 ಹಾಗೂ ಬೇರೆ ಜಿಲ್ಲೆಯ ಒಬ್ಬರು ಸೇರಿದ್ದಾರೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ 1335 ಸ್ಯಾಂಪಲ್‍ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 526 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 49,351 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 42,651 ನೆಗಟಿವ್ ಪ್ರಕರಣ, 5060 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಒಟ್ಟು 66 ಮಂದಿ ಮೃತಪಟ್ಟಿದ್ದಾರೆ. ಇನ್ನು 848 ಮಾತ್ರ ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ನಾಲ್ವರು ಸಾವು:ಜಿಲ್ಲೆಯ ಬಾದಾಮಿ ನಗರದ ನಿವಾಸಿ 68 ವರ್ಷದ ವೃದ್ಧ ಆಗಸ್ಟ 11 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 20 ರಂದು ಮೃತಪಟ್ಟಿದ್ದಾರೆ.

ಬಾದಾಮಿ ನಿವಾಸಿ 64 ವರ್ಷದ ವ್ಯಕ್ತಿ ಆಗಸ್ಟ್ 13 ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಶನಿವಾರ ಮೃತಪಟ್ಟಿದ್ದಾರೆ.

ಬೀಳಗಿ ಪಟ್ಟಣದ ನಿವಾಸಿ 51 ವರ್ಷದ ಮಹಿಳೆ ಆಗಸ್ಟ್ 14 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಬಾದಾಮಿಯ 77 ವರ್ಷದ ಪುರುಷ ಆಗಸ್ಟ್ 18 ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಮೃತರನ್ನು ಕೋವಿಡ್ ಮಾರ್ಗಸೂಚಿ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.