ADVERTISEMENT

ಬೀಳಗಿ | ಅಮಿತ್ ಶಾ, ಯಡಿಯೂರಪ್ಪ ಗುಣಮುಖರಾಗಲು ಹಾರೈಸಿ ದೇವರಿಗೆ ಪೂಜೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 13:17 IST
Last Updated 3 ಆಗಸ್ಟ್ 2020, 13:17 IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬಾಗಲಕೋಟೆ: ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಗನೆ ಗುಣಮುಖರಾಗಲಿ ಎಂದು ಹಾರೈಸಿ ಸೋಮವಾರ ಬೀಳಗಿಯಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಬೀಳಗಿ ಪಟ್ಟಣದ ಸಿದ್ದೇಶ್ವರ ದೇವಸ್ಥಾನದ ಎದುರು ನೆರೆದ ಶಾಸಕ ಮುರುಗೇಶ ನಿರಾಣಿ ಬೆಂಬಲಿಗರು ಅಮಿತ್ ಶಾ ಹಾಗೂ ಯಡಿಯೂರಪ್ಪ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.

ಕೊರೋನಾ ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಹೊರಗಡೆಯೇ ಪೂಜೆ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.