ADVERTISEMENT

ಬಾಗಲಕೋಟೆ: ನಾಲ್ವರಿಗೆ ಕೋವಿಡ್–19 ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 15:44 IST
Last Updated 14 ಜೂನ್ 2020, 15:44 IST
ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾದ ಯುವತಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣಪತ್ರ ವಿತರಿಸಿದರು
ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾದ ಯುವತಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣಪತ್ರ ವಿತರಿಸಿದರು   

ಬಾಗಲಕೋಟೆ: ಜಿಲ್ಲೆಯಲ್ಲಿ ಭಾನುವಾರ ಮತ್ತೆ ನಾಲ್ವರಿಗೆಕೋವಿಡ್–19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.

ಬಾದಾಮಿ ತಾಲ್ಲೂಕಿನ ಯಂಡಿಗೇರಿ ಗ್ರಾಮದ 26 ವರ್ಷದ ಯುವಕ (ಪಿ-6828), ಗುಳೇದಗುಡ್ಡದ 54 ವರ್ಷದ ಮಹಿಳೆ (ಪಿ-6829) ಹಾಗೂ 28 ವರ್ಷದ ಮಹಿಳೆ (ಪಿ-6830) ಮತ್ತು ರಬಕವಿಯ 25 ವರ್ಷದ ಪುರುಷ (ಪಿ-6831) ಹೊಸದಾಗಿ ಸೋಂಕು ದೃಢಪಟ್ಟವರು.

ಯಂಡಿಗೇರಿಯ ಯುವಕ ಆಂಧ್ರಪ್ರದೇಶದಿಂದ ಮರಳಿದ್ದಾರೆ. ಉಳಿದವರು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಅಲ್ಲಿನ ನಂಟಿನಿಂದ ಸೋಂಕು ತಗಲಿರುವುದು ದೃಢಪಟ್ಟಿದೆ.

ADVERTISEMENT

104 ಮಂದಿ ಸೋಂಕಿತರ ಪೈಕಿ 89 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 14 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.