ADVERTISEMENT

ಬಾಗಲಕೋಟೆಯಲ್ಲಿ ಕೋವಿಡ್‌ಗೆ 65 ವರ್ಷದ ವೃದ್ಧ ಬಲಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 15:44 IST
Last Updated 9 ಜುಲೈ 2020, 15:44 IST

ಬಾಗಲಕೋಟೆ: ಕೋವಿಡ್‌ಗೆ ಬನಹಟ್ಟಿಯ ಲಕ್ಷ್ಮೀ ನಗರದ 65 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ತಗುಲಿ ಸಾವಿಗೀಡಾದವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ ವೃದ್ಧನಿಗೆ ಜೂನ್ 24ರಂದು ಕೋವಿಡ್–19 ದೃಢ
ಪಟ್ಟಿತ್ತು. ಆಗಿನಿಂದಲೂ ಅವರು ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ತಡರಾತ್ರಿ ನಿಧನ
ರಾಗಿದ್ದಾರೆ. ಕೋವಿಡ್–19 ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

‘ಮೃತಪಟ್ಟ ವೃದ್ಧನಿಗೆ ಕಿಡ್ನಿಯ ತೊಂದರೆ ಇತ್ತು. ಅಧಿಕ ರಕ್ತದೊತ್ತಡದ ಜೊತೆಗೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು’ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.