ಬಾಗಲಕೋಟೆ: ಧಾರವಾಡದಲ್ಲಿ ಜರುಗಿದ ಸಹಕಾರ ಮಹಾಮಂಡಳದ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ಕಲಾ ಕಾಲೇಜಿನ ಪಿಯು ಪ್ರಥಮ ವರ್ಷದ ವಿದ್ಯಾರ್ಥಿನಿ ಲಕ್ಷ್ಮೀ ಪಾಟೀಲ ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಹಕಾರ ಸಪ್ತಾಹ ಕುರಿತು ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಚರ್ಚಾ ಸ್ಪರ್ಧೆಯಲ್ಲಿ ‘ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಮಾತ್ರವೇ ಪರಿಣಾಮಕಾರಿ ಪಾತ್ರ ವಹಿಸಬಲ್ಲವು’ ಎಂಬ ವಿಷಯ ಕುರಿತು ಮಾತನಾಡಿ ಬಹುಮಾನ ಗಳಿಸಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.