ಕೂಡಲಸಂಗಮ: ಸಮೀಪದ ಕೆಂಗಲ್, ಕಜಗಲ್ಲ ಗ್ರಾಮದ ಬಸ್ ನಿಲ್ದಾಣ ಸಂಪೂರ್ಣ ಶಿಥಿಲಗೊಂಡಿದ್ದು, ತೆರವುಗೊಳಿಸಿ ಬಸ್ ನಿಲ್ದಾಣ ನಿರ್ಮಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿಥಿಲಗೊಂಡ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಮಾಡಿದರು.
ಪ್ರತಿಭಟನಾ ಸ್ಥಳಕ್ಕೆ ಪಂಚಾಯತ್‌ರಾಜ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಾರಾವ್ ನಾಯಕ ಬಂದು ಮನವಿ ಸ್ವೀಕರಿಸಿದರು.
15 ದಿನದೊಳಗೆ ಬಸ್ ನಿಲ್ದಾಣ ಕಾಮಗಾರಿ ಆರಂಭಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಕರವೇ ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರವೀಣ ವಾಲಿಕಾರ ತಿಳಿಸಿದರು.
ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ರಮಜಾನ್ ನಡಪ್, ಇಲಕಲ್ಲ ತಾಲ್ಲೂಕು ಘಟಕದ ಅಧ್ಯಕ್ಷ ಮಹಾಂತೇಶ ವಂಕಲಕುಂಟಿ, ಹುನಗುಂದ ತಾಲ್ಲೂಕು ಘಟಕದ ಅಧ್ಯಕ್ಷ ರೋಹಿತ್ ಬಾರಕೇರ್ ಮುಂತಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.