ADVERTISEMENT

7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹ: ಶಾಸಕ ಕಾಶಪ್ಪನವರಗೆ ಮನವಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 16:27 IST
Last Updated 12 ಜುಲೈ 2024, 16:27 IST
ಇಳಕಲ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಇಳಕಲ್‌ ಹಾಗೂ ಹುನಗುಂದ ತಾಲ್ಲೂಕು ಘಟಕಗಳ ಪದಾಧಿಕಾರಿಗಳು  ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿದರು
ಇಳಕಲ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಇಳಕಲ್‌ ಹಾಗೂ ಹುನಗುಂದ ತಾಲ್ಲೂಕು ಘಟಕಗಳ ಪದಾಧಿಕಾರಿಗಳು  ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿದರು   

ಇಳಕಲ್‌: ‘ಏಳನೇ ವೇತನ ಆಯೋಗದ ವರದಿ, ಹಳೇ ಪಿಂಚಣಿ ಯೋಜನೆ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ  ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ರಾಜ್ಯ ನೌಕರರ ಸಂಘದ ಇಳಕಲ್‌ ತಾಲ್ಲೂಕು ಘಟಕದ ಅಧ್ಯಕ್ಷ ಪರಶುರಾಮ ಪಮ್ಮಾರ ಹಾಗೂ ಹುನಗುಂದ ತಾಲ್ಲೂಕು ಘಟಕದ ಅಧ್ಯಕ್ಷ ಸಂಗಣ್ಣ ಹಂಡಿ ನೇತೃತ್ವದಲ್ಲಿ ಪದಾಧಿಕಾರಿಗಳು, ವಿವಿಧ ಇಲಾಖೆಗಳ ನೌಕರರು ಶಾಸಕರ ನಿವಾಸಕ್ಕೆ ತೆರಳಿ, ನೌಕರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆಯುವಂತೆ ಮನವಿ ಮಾಡಿದರು.

 ಪರಶುರಾಮ ಪಮ್ಮಾರ ಮಾತನಾಡಿ, ‘ಏಳನೇ ವೇತನ ಆಯೋಗ ನೀಡಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ನೌಕರರಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕುʼ ಎಂದು ವಿನಂತಿಸಿದರು.

ADVERTISEMENT

ಶಾಸಕ ವಿಜಯಾನಂದ ಕಾಶಪ್ಪನವರ ಪ್ರತಿಕ್ರಿಯಿಸಿ, ʼಸರ್ಕಾರಿ ನೌಕರರ ಬೇಡಿಕೆಗಳು ಬಹುದಿನಗಳಿಂದ ಈಡೇರದೇ ಇರುವುದನ್ನು ಗಮನಿಸಿದ್ದೇನೆ. ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದ್ದೇವು. ಈಗ ನೌಕರರ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಿ ಜಾರಿಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನ ಸೆಳೆಯುಲಾಗುವುದು’ ಎಂದು ಭರವಸೆ ನೀಡಿದರು.

ನಂತರ ತಹಶೀಲ್ದಾರ್‌ ಕಚೇರಿಗೆ ತೆರಳಿ ತಹಶೀಲ್ದಾರ್‌ ಎಸ್.ಬಿ. ಕೂಡಲಗಿ ಅವರಿಗೆ ಮನವಿ ಸಲ್ಲಿಸಿದರು.

 ಈಶ್ವರ ಗಡ್ಡಿ, ಮುರಳಿಧರ ದೇಶಪಾಂಡೆ, ಗುಂಡಪ್ಪ ಕುರಿ, ಆನಂದ ಗದ್ದನಕೇರಿ, ಶರಣು ಕೊಣ್ಣೂರ, ರಂಗನಾಥ ಮಾಸರಡ್ಡಿ, ಮುತ್ತು ಬೀಳಗಿ, ಸಂಗಮೇಶ ಪಾಟೀಲ, ಸಿದ್ದು ಶೀಲವಂತರ, ಜಿ.ಎಸ್.ಅಡವಿ, ಸಿ.ಎಸ್.ಚಟ್ಟೇರ, ಜೆ.ಜಿ.ಗಡೇದ, ಎಸ್.ಕೆ.ಬಂಡರಗಲ್, ಮುನ್ನಾ ಬಾಗವಾನ, ಎಸ್.ಜಿ.ಬಂಗಾರಿ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.