ಬಾದಾಮಿ: ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಒಂದು ಟಿಎಂಸಿ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ತಾಲ್ಲೂಕು ಘಟಕದ ಹಸಿರು ಸೇನೆ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಮಧುರಾಜ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮಲಪ್ರಭಾ ನದಿ ಬತ್ತಿದೆ ನದಿ ದಂಡೆಯ 45ಕ್ಕೂ ಅಧಿಕ ಗ್ರಾಮಗಳ ಜನರಿಗೆ ಮತ್ತು ಜಾನುವಾರುಗಳಿಗ ಕುಡಿಯುವ ನೀರಿನ ತೊಂದರೆಯಾಗಿದ್ದು. ಶೀಘ್ರವಾಗಿ ನದಿಗೆ ನೀರು ಹರಿಸಬೇಕು ಎಂದು ಅವರು ಮನವಿಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.