ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಚುನಾವಣಾ ಕರ್ತವ್ಯದಲ್ಲಿ ನಿಷ್ಕಾಳಜಿ ತೋರಿದ ಬಾಗಲಕೋಟೆ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ನಾಗರಾಜ ಸಜ್ಜನ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಆದೇಶ ಹೊರಡಿಸಿದ್ದಾರೆ.
ಚುನಾವಣಾಧಿಕಾರಿ ಆದೇಶ ಪಾಲನೆ ಮಾಡದೇ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯ ಲೋಪ ಎಸಗಿರುವುದರಿಂದ ಇಲಾಖೆ ವಿಚಾರಣೆ ಬಾಕಿ ಇರಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಅಮಾನತುಗೊಳಿಸಿದ್ದಾರೆ. ಈ ಅವಧಿಯಲ್ಲಿ ಮೇಲಧಿಕಾರಿ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.