ADVERTISEMENT

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಮಾಜಿ ಶಾಸಕ ದೊಡ್ಡನಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 4:01 IST
Last Updated 1 ಸೆಪ್ಟೆಂಬರ್ 2025, 4:01 IST
‘ಧರ್ಮಸ್ಥಳ ಚಲೋ’ಗೆ ಇಳಕಲ್‌ನಲ್ಲಿ ಭಾನುವಾರ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಚಾಲನೆ ನೀಡಿದರು
‘ಧರ್ಮಸ್ಥಳ ಚಲೋ’ಗೆ ಇಳಕಲ್‌ನಲ್ಲಿ ಭಾನುವಾರ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಚಾಲನೆ ನೀಡಿದರು   

ಇಳಕಲ್: ‘ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆದಿದ್ದು, ಈ ಪ್ರಕರಣವನ್ನು ಎನ್.ಐ.ಎಗೆ ನೀಡಬೇಕು’ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಆಗ್ರಹಿಸಿದರು.

ಅವರು ಭಾನುವಾರ ನಗರದಲ್ಲಿ ‘ಧರ್ಮಸ್ಥಳ ಚಲೋ’ಗೆ ಚಾಲನೆ ನೀಡಿ ಮಾತನಾಡಿದರು.

‘ಈಚೆಗೆ ಕೇಳಿ ಬಂದಿರುವ ಆರೋಪಗಳು ಹಿಂದೂ ಶ್ರದ್ಧಾ ಕೇಂದ್ರದ ವಿರುದ್ಧ ಎಡಪಂಥೀಯರು ಹಾಗೂ ವಿದೇಶಿ ಶಕ್ತಿಗಳು ಮಾಡುತ್ತಿರುವ ಕುತಂತ್ರವಾಗಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಈ ಹುನ್ನಾರ ಖಂಡಿಸಿ, ಸೋಮವಾರ ಬಿಜೆಪಿ ಸಮಾವೇಶ ಹಮ್ಮಿಕೊಂಡಿದೆ. ಹುನಗುಂದ ಮತಕ್ಷೇತ್ರದಿಂದ ನೂರಾರು ಕಾರ್ಯಕರ್ತರೊಂದಿಗೆ ಭಾಗವಹಿಸಲು ತೆರಳುತ್ತಿದ್ದೇವೆ’ ಎಂದು ಹೇಳಿದರು.

ADVERTISEMENT

ಸಮೀಪದ ಗುಗ್ಗಲಮರಿ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಧರ್ಮಸ್ಥಳ ಪ್ರಯಾಣ ಮುಂದುವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.