ಮಹಾಲಿಂಗಪುರ: ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದ್ದ ಸಮೀಪದ ಢವಳೇಶ್ವರ ಸೇತುವೆ ಶುಕ್ರವಾರ ಸಂಚಾರಕ್ಕೆ ಮುಕ್ತಗೊಂಡಿದೆ.
ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ ಸೇತುವೆ ಜಲಾವೃತಗೊಂಡಿತ್ತು. ಗುರುವಾರ ರಾತ್ರಿ ಒಳ ಹರಿವು ಇಳಿಮುಖಗೊಂಡಿದ್ದರಿಂದ ಸೇತುವೆ ಮೇಲಿನ ಅಲ್ಪ ಪ್ರಮಾಣದ ನೀರಿನಲ್ಲಿಯೇ ಜನರು ಸಂಚರಿಸಲು ಆರಂಭಿಸಿದರು. ಶುಕ್ರವಾರ ಪೂರ್ಣ ಪ್ರಮಾಣದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದ್ದು, ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳ ಗಡಿಗೆ ಹೊಂದಿಕೊಂಡಿರುವ ಜನರ ಸಂಚಾರ ಎಂದಿನಂತೆ ಆರಂಭವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.