ADVERTISEMENT

ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ರೈತರ ಸಂವಾದ

​ಪ್ರಜಾವಾಣಿ ವಾರ್ತೆ
Published 14 ಜೂನ್ 2025, 16:20 IST
Last Updated 14 ಜೂನ್ 2025, 16:20 IST

ಮುಧೋಳ: ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸೋಮವಾರ ಬೆಳಿಗ್ಗೆ 10 ಗಂಟೆಗೆ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ರಾಜ್ಯ ಸಂಘ, ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ರೈತ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕಾರ್ಯಕ್ರಮವನ್ನು ಉದ್ಘಾಟಸಿ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಎಸ್.ಪಿ. ಅಮರನಾಥರೆಡ್ಡಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಪಿ.ಎಲ್.ಪಾಟೀಲ, ಆಹಾರ ನಾಗರಿಕ ಪುರೈಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕನವಾಡಿ, ಬೆಳಗಾವಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದ ನಿರ್ದೇಶಕ ರಾಜಗೋಪಾಲ ಎಸ್., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ ಕಳ್ಳೆನ್ನವರ ಪಾಲ್ಗೊಳ್ಳಲಿದ್ದಾರೆ.

ಸಮೀರವಾಡಿ ಗೋದಾವರಿ ಬಯೋರಿಪೈನರಿಸ್, ಮುಧೋಳದ ನಿರಾಣಿ ಶುಗರ್ಸ್, ಉತ್ತೂರಿನ ಇಂಡಿಯನ್ ಕೇನ್ ಪಾವರ್, ಸಿದ್ದಾಪುರದ ಪ್ರಭುಲಿಂಗೇಶ್ವರ ಶುಗರ್ಸ್, ಬಾಡಗಂಡಿ ಬೀಳಗಿ ಶುಗರ್ಸ್ ಕಾರ್ಖಾನೆಗಳ ಆಡಳಿತ ಮಂಡಳಿ ಅಧಿಕಾರಿಗಳು ಉಪಸ್ಥಿತರಿರುವರು.

ADVERTISEMENT

ಇದೇ ಸಂದರ್ಭದಲ್ಲಿ ಮಣ್ಣಿನ ಫಲವತ್ತತೆ ಕುರಿತು ಎಸ್.ಎ.ಗದ್ದನಕೇರಿ, ಕಬ್ಬಿನ ಇಳುವರಿ ಹೆಚ್ಚಿಸುವ ಕುರಿತು ಸುಧೀರ ಕತ್ತಿ ಉಪನ್ಯಾಸ ನೀಡಲಿದ್ದಾರೆ. ತಾಲ್ಲೂಕಿನ ಸಮಸ್ತ ಕಬ್ಬು ಬೆಳೆಗಾರರು ಸಂವಾದದಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟನೆ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.