
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಕರ್ನಾಟಕ ಬಯಲಾಟ ಅಕಾಡೆಮಿ ಹಾಗೂ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜು ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ನ.1 ರಂದು ಬೆಳಿಗ್ಗೆ 10ಕ್ಕೆ ಕಾಲೇಜಿನಲ್ಲಿ ದೊಡ್ಡಾಟ, ತೊಗಲು ಗೊಂಬೆಯಾಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಕವಿ ಸತ್ಯಾನಂದ ಪಾತ್ರೋಟ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್. ದುರ್ಗಾದಾಸ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಕಾಲೇಜಿನ ಪ್ರಾಚಾರ್ಯ ಎಂ. ಎನ್. ಗರಗ, ಅಕಾಡೆಮಿ ಸದಸ್ಯ ಲಕ್ಷ್ಮಣ ದೇಸಾರಟ್ಟಿ ಮತ್ತಿತರರು ಭಾಗಿಯಾಗಲಿದ್ದಾರೆ.
‘ಪಂಪನಿಂದ ಕುವೆಂಪುವರೆಗಿನ ಕನ್ನಡ ವಿವೇಕದ ಹೆಜ್ಜೆ ಗುರುತುಗಳು’ ವಿಷಯದ ಶಿವಮೊಗ್ಗದ ಸರ್ಜಾಶಂಕರ ಹರಳಿಮಠ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.