ADVERTISEMENT

‘ಪ್ರತಿ ಮನೆಗೆ ಶುದ್ಧ ನೀರು ಪೂರೈಕೆ’

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 16:26 IST
Last Updated 19 ನವೆಂಬರ್ 2020, 16:26 IST
ಬಾದಾಮಿಯಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ.ಕೆ. ಉಪ್ಪಲದಿನ್ನಿ ಉದ್ಘಾಟಿಸಿದರು
ಬಾದಾಮಿಯಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ.ಕೆ. ಉಪ್ಪಲದಿನ್ನಿ ಉದ್ಘಾಟಿಸಿದರು   

ಬಾದಾಮಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಲ ಜೀವನ ಮಿಷನ್‌ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ.ಕೆ. ಉಪ್ಪಲದಿನ್ನಿ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಗುರುವಾರ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ವಿನ್ ಸೊಸೈಟಿ ಆಶ್ರಯದಲ್ಲಿ ತಾಲ್ಲೂಕಿನ ಪಿಡಿಒ ಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ನೀರು ವ್ಯರ್ಥವಾಗದಂತೆ ಶುದ್ಧ ಕುಡಿಯುವ ನೀರನ್ನು ಹೇಗೆ ಬಳಸಬೇಕು ಎಂಬುದನ್ನು ಗ್ರಾಮ ಪಂಚಾಯ್ತಿ ಪಿಡಿಒ ಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿ ಡಾ. ಎಂ.ಬಿ. ಪಾಟೀಲ ಹೇಳಿದರು.

ADVERTISEMENT

ಜಲ ಜೀವನ ಮಿಷನ್ ಯೋಜನೆಯಲ್ಲಿ ಸಮುದಾಯದ ಸಹಭಾಗಿತ್ವದಲ್ಲಿ 2024 ರ ಒಳಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುವುದು. ಸಮುದಾಯದಿಂದ ಶೇ. 10 ರಷ್ಟು ವಂತಿಗೆ ನೀಡಬೇಕು ಎಂದು ವಿಜಯ ಕಾಂಬಳೆ ಹೇಳಿದರು. ಸಂಪನ್ಮೂಲ ವ್ಯಕ್ತಿ ಎಂ.ಜಿ. ದಾಸರ ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನದ ಕುರಿತು ವಿವರಿಸಿದರು. ಶ್ರೀನಿವಾಸ ವಾಲಿಕಾರ, ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳ ಪಿಡಿಒಗಳು ಶಿಬಿರದಲ್ಲಿ ಇದ್ದರು. ಶಿವಾನಂದ ಬಿಜ್ಜರಗಿ ಸ್ವಾಗತಿಸಿದರು. ವಸಂತ ದಾದನಟ್ಟಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.