ADVERTISEMENT

ಬಾಗಲಕೋಟೆಯಲ್ಲಿ ಮುಂಗಾರು ಮಳೆ: ಹುನಗುಂದ ಕರಡಿ ರಸ್ತೆ ಸಂಚಾರ ಬಂದ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 6:05 IST
Last Updated 3 ಜೂನ್ 2024, 6:05 IST
   

ಬಾಗಲಕೋಟೆ: ಮುಂಗಾರು ಮಳೆ ಸುರಿಯಲಾರಂಭಿಸಿದ್ದು, ಜಿಲ್ಲೆಯಲ್ಲಿ ಹಳ್ಳಗಳು ತುಂಬಿ ಹರಿಯುತ್ತಿವೆ.

ಹುನಗುಂದ – ಕರಡಿ ಸಂಪರ್ಕಿಸುವ ರಸ್ತೆಯಲ್ಲಿನ ಬೇಕಮಲದಿನ್ನಿ ಗ್ರಾಮದ ಹತ್ತಿರ ಹಳ್ಳ ರಸ್ತೆ ಮೇಲೆ ಹರಿಯುತ್ತಿರುವುದರಿಂದ ವಾಹನಗಳ ಸಂಚಾರ ಬಂದ್ ಆಗಿದೆ.

ಬೆಳಗಿನ ಜಾವಾದಿಂದ ಜಿಲ್ಲೆಯ ಬಹುತೇಕ ಕಡೆ ಮಳೆ ಆಗುತ್ತಿದೆ.

ADVERTISEMENT

ಬಾಗಲಕೋಟೆ, ಹುನಗುಂದ, ಇಳಕಲ್, ಬಾದಾಮಿ, ಬೀಳಗಿ, ರಬಕವಿ ಬನಹಟ್ಟಿ ಸೇರಿದಂತೆ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.