ADVERTISEMENT

ಅಮೀನಗಡ | ಕುಲಕಸಬಿನ ಜೊತೆ ಶಿಕ್ಷಣಕ್ಕೆ ಆದ್ಯತೆ ನೀಡಿ: ಶಿವಾನಂದ ಹೂಗಾರ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 6:50 IST
Last Updated 13 ಸೆಪ್ಟೆಂಬರ್ 2025, 6:50 IST
ಅಮೀನಗಡ ಪಟ್ಟಣದಲ್ಲಿ ನಡೆದ ಶರಣ ಹೂಗಾರ ಮಾದಯ್ಯ ಜಯಂತಿಯನ್ನು ಶಂಕರರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು
ಅಮೀನಗಡ ಪಟ್ಟಣದಲ್ಲಿ ನಡೆದ ಶರಣ ಹೂಗಾರ ಮಾದಯ್ಯ ಜಯಂತಿಯನ್ನು ಶಂಕರರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು   

 ಅಮೀನಗಡ: ‘ಹೂಗಾರ ಸಮಾಜವು ತನ್ನದೇ ಆದ ಇತಿಹಾಸ ಹೊಂದಿದ್ದು, ಇಂತಹ ಹಿಂದುಳಿದ ಸಮಾಜಗಳ ಬಗ್ಗೆ ಸರ್ಕಾರ ಗಮನಹರಿಸಿ ಯೋಜನೆ ರೂಪಿಸಬೇಕು’ ಎಂದು ಮುದ್ದೇಬಿಹಾಳ ಎಂಜಿವಿಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಶಿವಾನಂದ ಹೂಗಾರ ಹೇಳಿದರು.

ಪಟ್ಟಣದ ಸಂಗಮೇಶ್ವರ ದೇವಸ್ಥಾನ ಹತ್ತಿರದ ಶಿವಸಿಂಪಿ ಸಮುದಾಯ ಭವನದಲ್ಲಿ ಹೂಗಾರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ  ಶುಕ್ರವಾರ ನಡೆದ ಶರಣ ಹೂಗಾರ ಮಾದಯ್ಯ  ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸಮಾಜವು ಪ್ರಗತಿ ಹೊಂದಬೇಕಾದರೆ ಕುಲಕಸುಬಿನ ಜೊತೆಗೆ ಶಿಕ್ಷಣಕ್ಕೆ ಆದ್ಯತೆ ನೀಡುವುದು ಬಹುಮುಖ್ಯ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಬಸವಣ್ಣನವರು ಕೆಳ ವರ್ಗದ ಸಮುದಾಯಗಳನ್ನು ಮೇಲೆತ್ತುವ ಕಾರ್ಯ ಮಾಡಿದರು’ ಎಂದರು.

ADVERTISEMENT

ಪ್ರಭುಶಂಕರೇಶ್ವರ ಮಠದ ಶಂಕರರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಬಸವಾದಿ ಶರಣರ ವಿಚಾರಗಳಿಂದ ನಾವು ಉತ್ತಮ ಬದುಕು ಕಟ್ಟಿಕೊಳ್ಳಬಹುದು. ದುಶ್ಚಟಗಳ ದಾಸರಾದರೆ ಬದುಕಿನ ಬಂಡಿ ಹಳಿ ತಪ್ಪುತ್ತದೆ. ಪ್ರತಿಯೊಬ್ಬರು ಕಾಯಕದಲ್ಲಿ ತೊಡಗಿಸಿಕೊಳ್ಳಿ. ಹೂವು ಮಾರುವುದು ಮತ್ತು ಪತ್ರಿ ಕೊಡುವುದು ಪವಿತ್ರ ಕಾಯಕ, ಅದನ್ನು ಮರೆಯಬಾರದು’ ಎಂದು ತಿಳಿಸಿದರು.

ಮುಖಂಡರಾದ ಬಸವರಾಜ ಹೂಗಾರ ಮತ್ತು ಸಕ್ರಪ್ಪ ಹೂಗಾರ ಮಾತನಾಡಿದರು.

ಸಂಗಪ್ಪ ಹೂಗಾರ, ತಾಲ್ಲೂಕು ಹೂಗಾರ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಹೂಗಾರ, ಇಳಕಲ್ ತಾಲ್ಲೂಕು ಹೂಗಾರ ಸಮಾಜದ ಅಧ್ಯಕ್ಷ ಶಿವಲಿಂಗಪ್ಪ ಹೂಗಾರ, ಶರಣಪ್ಪ ಹೂಗಾರ, ಮಲ್ಲಪ್ಪ ಹೂಗಾರ, ಹನಮಂತಪ್ಪ ಹೂಗಾರ, ನಿಂಗಣ್ಣ ತಮದಡ್ಡಿ, ಶೇಕಣ್ಣ ಇಲಕಲ್ಲ, ಅಂದಪ್ಪ ತಾಳಿಕೋಟಿ, ಮಹಾಂತೇಶ ಐಹೊಳೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.