ಇಳಕಲ್: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಸಮೀಪದ ಕಂದಗಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿದ ಅವರು, ‘ಪ್ರತಿಯೊಂದು ಕುಟುಂಬವು ತನ್ನ ನೆರೆಹೊರೆಯಲ್ಲಿ ಸಾಧ್ಯವಿದ್ದ ಕಡೆಗಳಲ್ಲಿ ಸಸಿ ನೆಟ್ಟು, ಪೋಷಿಸಬೇಕು. ಹಸಿರೇ ಉಸಿರು ಎನ್ನುವುದನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಅರಣ್ಯ ಇಲಾಖೆ ಮರ ಬೆಳೆಸಲು ಇಚ್ಛಿಸುವ ಸಂಘ ಸಂಸ್ಥೆಗಳಿಗೆ, ಪ್ರತಿ ನಾಗರಿಕರಿಗೆ ಅಗತ್ಯ ಸಹಕಾರ ನೀಡಬೇಕು’ ಎಂದು ಸೂಚಿಸಿದರು.
ತಾಲ್ಲೂಕು ಕಿಸಾನ್ ಘಟಕದ ಅಧ್ಯಕ್ಷ ಚನ್ನಪ್ಪಗೌಡ ನಾಡಗೌಡ, ಕಂದಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಹಳ್ಳೊಳ್ಳಿ, ಅರಣ್ಯ ಇಲಾಖೆ ಸಿಬ್ಬಂದಿ, ಮೊರಾರ್ಜಿ ಶಾಲೆಯ ಸಿಬ್ಭಂದಿ, ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.