ಬಾಗಲಕೋಟೆ: ನಕಲಿ ಪಿಎಚ್.ಡಿ ಹಾಗೂ ಅಂಗವಿಕಲ ಪ್ರಮಾಣಪತ್ರ ತಡೆಗೆ ಆಗ್ರಹಿಸಿ ಬಾಗಲಕೋಟೆ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು, ಪ್ರಾಚಾರ್ಯ ಅರುಣಕುಮಾರ ಗಾಳಿ ಅವರ ಮೂಲಕ ಉನ್ನತ ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕ ಚಂದ್ರಶೇಖರ ಕಾಳನ್ನವರ ಮಾತನಾಡಿ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಕಾಲೇಜು ಶಿಕ್ಷಣ ಇಲಾಖೆ ಯುಜಿಸಿ ವಿದ್ಯಾರ್ಹತೆಗಳಾದ ಕೆಸೆಟ್/ನೆಟ್/ಪಿಎಚ್‌ಡಿ ಹೊಂದಿರುವುದು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಆದರೆ, ಕೆಲವರು ಹೊರ ರಾಜ್ಯಗಳ ವಿಶ್ವವಿದ್ಯಾಲಯಗಳಿಂದ ನಕಲಿ ಪಿಎಚ್‌ಡಿ ಪ್ರಮಾಣ ಪತ್ರಗಳ ಮತ್ತು ನಕಲಿ ಅಂಗವಿಕಲ ಪ್ರಮಾಣಪತ್ರ ತಂದು ಆನ್‍ಲೈನ್ ಅರ್ಜಿಯಲ್ಲಿ ಸೇರ್ಪಡೆ ಮಾಡುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದರು.
ಯುಜಿಸಿ ವಿದ್ಯಾರ್ಹತೆ ಹೊಂದಿ ಹತ್ತು, ಹದಿನೈದು ವರ್ಷಗಳ ಕಾಲ ಕಡಿಮೆ ವೇತನ ಪಡೆದು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗುತ್ತಿದೆ. ಉನ್ನತ ಶಿಕ್ಷಣ ಇಲಾಖೆ ಇಂತಹ ನಕಲಿ ಪ್ರಮಾಣ ಪತ್ರಗಳನ್ನು ಪಡೆದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ, ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಅತಿಥಿ ಉಪನ್ಯಸಕರಾದ ಮನೋಹರ ಪೂಜಾರ, ಸಂತೋಷ ಕಳ್ಳಿಮನಿ, ವಿಜಯಕುಮಾರ ಗಂಗಲ್, ವಿಜಯಮಹಾಂತೇಶ ಮಲ್ಲಿಗಿಹಾಳ, ರಾಘವೇಂದ್ರ ಬಡಿಗೇರ, ಸಂತೋಷ ಕಾಳನ್ನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.