ಬಾದಾಮಿ: ತಾಲ್ಲೂಕಿನಲ್ಲಿ ಇಬ್ಬರು ನಕಲಿ ವೈದ್ಯರನ್ನು ಬಂಧಿಸಿ ಆಸ್ಪತ್ರೆಯನ್ನು ಸೀಜ್ ಮಾಡಲಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಬಿ. ಪಾಟೀಲ ಹೇಳಿದರು.
ಖಚಿತ ಮಾಹಿತಿಯ ಮೇರೆಗೆ ಬೇಲೂರ ಮತ್ತು ಹೊಸೂರ ಗ್ರಾಮಗಳ ನಕಲಿ ವೈದ್ಯರ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲ ಉಪಕರಣಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗೆ ತಿಳಿಸಲಾಗಿದೆ ಎಂದರು.
ಡೆಂಗಿ ನಿಯಂತ್ರಣ: ತಾಲ್ಲೂಕಿನಲ್ಲಿ ಇಲ್ಲಿಯವರೆಗೆ 13 ಡೆಂಗಿ ಮತ್ತು ಒಂದು ಚಿಕುನ್ ಗುನ್ಯಾ ಪ್ರಕರಣ ದಾಖಲಾಗಿದ್ದು. ಎಲ್ಲ ರೋಗಿಗಳಿಗೆ ಚಿಕಿತ್ಸೆ ನೀಡಿದ್ದು ಗುಣಮುಖರಾಗುತ್ತಿದ್ದಾರೆ ಎಂದು ತಾಲ್ಲೂಕು ಆರೋಗ್ಯ ಇಲಾಖೆ ಅಧಿಕಾರಿ ಪಾಟೀಲ ಹೇಳಿದರು.
ರೋಗ ನಿಯಂತ್ರಣಕ್ಕೆ ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಲು ಸ್ಥಳೀಯ ಸಂಸ್ಥೆಗಳಿಗೆ ಮತ್ತು ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಸಮನ್ವಯ ಸಭೆಯ ಮೂಲಕ ತಿಳಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.