ADVERTISEMENT

ಬಾಗಲಕೋಟೆ | ನಕಲಿ ಅಂಕಪಟ್ಟಿ: ಮೂವರು ಗ್ರಾಮ ಲೆಕ್ಕಿಗರಿಗೆ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 2:54 IST
Last Updated 29 ಆಗಸ್ಟ್ 2025, 2:54 IST
   

ಬಾಗಲಕೋಟೆ: ಪಿಯುಸಿ ದ್ವಿತೀಯ ವರ್ಷದ ನಕಲಿ ಅಂಕಪಟ್ಟಿ ಸಲ್ಲಿಸಿ ಗ್ರಾಮ ಲೆಕ್ಕಿಗ ಹುದ್ದೆ ಪಡೆದಿದ್ದ ಮೂವರಿಗೆ ಹಿರಿಯ ಸಿವಿಲ್‌ ಮತ್ತು ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಮಹೇಶ ಪಾಟೀಲ ಅವರು ನಾಲ್ಕು ವರ್ಷ ಜೈಲು ಶಿಕ್ಷೆಯ ಜೊತೆಗೆ ₹ 25 ಸಾವಿರ ದಂಡ ವಿಧಿಸಿ, ಆದೇಶ ಹೊರಡಿಸಿದ್ದಾರೆ.

2011ರಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿತ್ತು. ಹುದ್ದೆ ಪಡೆಯಲು ನಕಲಿ ಅಂಕಪಟ್ಟಿ ಸಲ್ಲಿಸಿ, ನವ್ಯಶ್ರೀ ದೇವರಾಜ, ನಟರಾಜ ಮುನಿಯಪ್ಪ ಮತ್ತು ಸುಬ್ರಮಣಿ ಎನ್‌.ಸಿ ಹುದ್ದೆ ಗಿಟ್ಟಿಸಿಕೊಂಡಿದ್ದರು. ಅವರ ವಿರುದ್ಧ ಬೀಳಗಿ ಮತ್ತು ನವನಗರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. 

ತುಮಕೂರು ಜಿಲ್ಲೆಯ ಡಿ.ಎಂ. ಪಾಳ್ಯದ ನವ್ಯಶ್ರೀ, ಮುಧೋಳ ತಾಲ್ಲೂಕಿನ ಜಿರಗಾಳ, ಚಿಚಖಂಡಿ ಗ್ರಾಮದಲ್ಲಿ, ಚಿಕ್ಕಬಳ್ಳಾಪುರ ಶಾಂತಿನಗರದ ನಟರಾಜ ಜಮಖಂಡಿ ತಾಲ್ಲೂಕಿನ ಹನಗಂಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ನಲ್ಲೇನಹಳ್ಳಿಯ ಸುಬ್ರಮಣಿ ಜಮಖಂಡಿ ಹಾಗೂ ರಬಕವಿ–ಬನಹಟ್ಟಿ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT

ಹಿರಿಯ ಸಹಾಯಕ  ಸರ್ಕಾರಿ ಅಭಿಯೋಜಕ ಮಹಾಂತೇಶ ಮಸಳಿ ಸರ್ಕಾರದ ಪರವಾಗಿ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.