ADVERTISEMENT

ಬಾಗಲಕೋಟೆ: ಬಡಿಗೆ ಹಿಡಿದು ರೈತರ ಕಾವಲು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 0:09 IST
Last Updated 14 ನವೆಂಬರ್ 2025, 0:09 IST
<div class="paragraphs"><p>ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿಯ ಸಾಯಿಪ್ರಿಯಾ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಬಡಿಗೆ ಹಿಡಿದು ಕಾವಲು ನಿಂತಿರುವುದು</p></div>

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿಯ ಸಾಯಿಪ್ರಿಯಾ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಬಡಿಗೆ ಹಿಡಿದು ಕಾವಲು ನಿಂತಿರುವುದು

   

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿಯ ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆಯಲ್ಲಿ ರೈತರು ಕಬ್ಬಿನ ಟ್ರ್ಯಾಕ್ಟರ್‌ಗಳ ಕಾವಲಿಗೆ ಗುರುವಾರ ರಾತ್ರಿ ಬಡಿಗೆ ಹಿಡಿದು ನಿಂತಿದ್ದಾರೆ.

ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಆದ ಪರಿಸ್ಥಿತಿ ಇಲ್ಲಿಯೂ ಬರಬಾರದು ಎಂದು ತಡೆಯಲು ಸಜ್ಜಾಗಿದ್ದಾಗಿ’ ರೈತರೊಬ್ಬರು ತಿಳಿಸಿದರು.

ADVERTISEMENT

‘ರಾಜ್ಯ ಸರ್ಕಾರ ಸೂಚಿಸಿದ ದರವನ್ನು ನೀಡಲು ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳು ಮುಂದೆ ಬಂದಿವೆ. ರೈತರಿಗಾಗಿ ಹೋರಾಟ ಮಾಡುವವರು ಯಾರಾದರೂ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚುತ್ತಾರೆಯೇ? ಸರ್ಕಾರ ನಿಗದಿಪಡಿಸಿದ ದರ ಒಪ್ಪಿಗೆಯಾಗದಿದ್ದರೆ, ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.