
ಪ್ರಜಾವಾಣಿ ವಾರ್ತೆ
ಪ್ರತಿಭಟನೆ
ಬಾಗಲಕೋಟೆ: ಜಿಲ್ಲೆಯ ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಿಷೇಧಾಜ್ಞೆ ನಡುವೆಯೂ ರೈತರು ಶುಕ್ರವಾರ ಪ್ರತಿಭಟನೆ ಆರಂಭಿಸಿದ್ಧಾರೆ.
ಗೋದಾವರಿ ಕಾರ್ಖಾನೆ ಆವರಣದಲ್ಲಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಸವಂತ ಕಾಂಬಳೆ, ಸುಭಾಷ ಶಿಬರೂರ ನೇತ್ರತ್ವದಲ್ಲಿ 20ಕ್ಕೂ ಹೆಚ್ಚು ಜನರು ಪ್ರತಿಭಟನೆ ಮಾಡುತ್ತಿದ್ದಾರೆ.
ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 300ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
ಮುಧೋಳದಲ್ಲಿ ಪೊಲೀಸರು ಪಥ ಸಂಚಲನ ನಡೆಸಲಿದ್ದಾರೆ.
ಕಾರ್ಖಾನೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.