ಕೆರೂರ: ಪಟ್ಟಣ ಸೇರಿದಂತೆ ಹೋಬಳಿಯ ಸುತ್ತಮುತ್ತ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರೈತರು ಯೂರಿಯಾ ಗೊಬ್ಬರ ಖರೀದಿಸಲು ಅಂಗಡಿಗೆ ಮುಗಿಬಿದ್ದ ದೃಶ್ಯ ಮಂಗಳವಾರ ಕಂಡುಬಂತು.
ಭರದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರು, ಹೆಚ್ಚಾಗಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಗೊಬ್ಬರಕ್ಕಾಗಿ ಅಲೆದಾಡುವುದು ಸಾಮಾನ್ಯವಾಗಿತ್ತು.
‘ಕೇವಲ 170 ಚೀಲ ಗೊಬ್ಬರ ಬಂದಿರುವುದರಿಂದ ಕೆಲವೇ ರೈತರು ಖರೀದಿಸಿದ್ದಾರೆ. ಕೆಲವರು ನಿರಾಸೆಯಿಂದ ಹಿಂದಿರುಗಿದ್ದಾರೆ. ಅಗತ್ಯಕ್ಕೆ ತಕ್ಕಂತೆ ಗೊಬ್ಬರ ಪೂರೈಕೆಯಾಗುತ್ತಿಲ್ಲ’ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ರೈತರನ್ನು ನಿಯಂತ್ರಿಸಲು ಪೊಲೀಸರು ಸಹಾಯದೊಂದಿಗೆ ಗೊಬ್ಬರ ವಿತರಣೆ ಮಾಡಲಾಯಿತು.
‘ಒಂದು ಆಧಾರ್ ಕಾರ್ಡ್‌ಗೆ 1ರಿಂದ 2 ಚೀಲ ಪೂರೈಕೆ ಮಾಡಲಾಗಿದೆ’ ಎಂದು ರಡ್ಡೇರ ತಿಮ್ಮಾಪೂರ ಪಿಕೆಪಿಎಸ್ ಸೊಸೈಟಿ ಸಿಬ್ಬಂದಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.