ಬೀಳಗಿ: ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶಾಮ ಶಿಂಧೆ ಒತ್ತಾಯಿಸಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಜೂನ್ 27ರಂದು ಗೋ ರಕ್ಷಣೆಗೆ ಹೋದ 4 ಗೋ ರಕ್ಷಕರನ್ನು ಗ್ರಾಮದ ಕೆಲ ಗುಂಡಾಗಳು ರಾಕ್ಷಸರಂತೆ ವರ್ತಿಸಿ ತೆಂಗಿನಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಖಂಡಿಸಿ ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಂತಹ ಅಮಾನವೀಯ ಘಟನೆ ನಡೆದಿದ್ದು ಅತ್ಯಂತ ನಾಚಿಕೆಗೇಡು, ನಾಗರಿಕ ಸಮಾಜ ತಲೆ ತಗ್ಗಿಸುವಂತ ಹೇಯ ಕೃತ್ಯವಾಗಿದೆ’ ಎಂದು ದೂರಿದರು.
ಶ್ರೀರಾಮ ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಅಜ್ಜನವರು, ತಾಲ್ಲೂಕು ಅಧ್ಯಕ್ಷ ಶಿವನಗೌಡ ಕಾನಗೌಡರ, ಪ್ರಧಾನ ಕಾರ್ಯದರ್ಶಿ ಬಸವರಾಜ ಚಿಮ್ಮಡ, ಸೋಮಯ್ಯ ಹಿರೇಮಠ, ಸುನಿಲ ಬಾಳಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.