ಬಾಗಲಕೋಟೆ: ‘ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆಯಿಲ್ಲ. ರೈತರು ಅವಶ್ಯಕತೆಗನುಗುಣವಾಗಿ ಗೊಬ್ಬರ ಖರೀದಿಸಬಹುದು’ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ 14,540 ಮೆಟ್ರಿಕ್ ಟನ್, ಡಿ.ಎ.ಪಿ 2465 ಮೆಟ್ರಿಕ್ ಟನ್, ಕಾಂಪ್ಲೆಕ್ಸ್ 17.159 ಮೆಟ್ರಿಕ್ ಟನ್, ಎಂ.ಒ.ಪಿ 3400 ಮೆಟ್ರಿಕ್ ಟನ್ ಹಾಗೂ ಎಸ್.ಎಸ್.ಪಿ 1668 ಮೆಟ್ರಿಕ್ ಟನ್ ದಾಸ್ತಾನು ಇದ್ದು, ರಸಗೊಬ್ಬರದ ಕೊರತೆ ಇಲ್ಲ. ಹೀಗಾಗಿ ರೈತರು ತಮ್ಮ ಅವಶ್ಯಕತೆಗನುಗುಣವಾಗಿ ರಸಗೊಬ್ಬರವನ್ನು ಖರೀದಿಸಬಹುದು ಎಂದು ತಿಳಿಸಿದ್ದಾರೆ.
ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು. ಖರೀದಿಸಿದ ಕೃಷಿ ಪರಿಕರಗಳಿಗೆ ರಶೀದಿ ಪಡೆದು ತಮ್ಮ ಬಳಿ ಇಟ್ಟುಕೊಳ್ಳಬೇಕು. ಕಾನೂನುಬಾಹಿರ ಮತ್ತು ನಕಲಿ ಬಿತ್ತನೆ ಬೀಜ ಅಥವಾ ರಸಗೊಬ್ಬರ ಮಾರಾಟ ಕಂಡು ಬಂದಲ್ಲಿ ಮಾಹಿತಿ ನೀಡಿ, ಈ ಬಗ್ಗೆ ಮಾಹಿತಿ ನೀಡುವವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.
ಸಂಬಂಧಿಸಿದ ದೂರುಗಳನ್ನು ನೀಡಲು ಬಾಗಲಕೋಟೆ ತಾಲ್ಲೂಕು (8277933527, 8277933528), ಬಾದಾಮಿ ತಾಲ್ಲೂಕು (8277933508), ಹುನಗುಂದ ತಾಲ್ಲೂಕು (8277933504, 8277933556), ಬೀಳಗಿ ತಾಲ್ಲೂಕು (8277933507), ಮುಧೋಳ ತಾಲ್ಲೂಕು (8277933586, 8277933551), ಜಮಖಂಡಿ ತಾಲ್ಲೂಕು (8277933569, 8277933583) ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಕೃಷಿ ಇಲಾಖೆಯ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.