ADVERTISEMENT

ಕಲಾವಿದರ ಪ್ರೋತ್ಸಾಹಿಸುವ ಮಾಜಿ ಸಚಿವ ಎಸ್.ಆರ್.ಪಾಟೀಲ: ಯಶವಂತ ಸರದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 21 ಮೇ 2025, 11:34 IST
Last Updated 21 ಮೇ 2025, 11:34 IST
ಬೀಳಗಿ ಸ್ವಾಮಿ ವಿವೇಕಾನಂದ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲ ಮಾತನಾಡಿದರು 
ಬೀಳಗಿ ಸ್ವಾಮಿ ವಿವೇಕಾನಂದ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲ ಮಾತನಾಡಿದರು    

ಬೀಳಗಿ: ‘ಸಜ್ಜನ, ಪ್ರಾಮಾಣಿಕ, ಪರೋಪಕಾರದ ದೂರದೃಷ್ಟಿ ಇರುವಂತಹ ಮಾಜಿ ಸಚಿವ ಎಸ್.ಆರ್.ಪಾಟೀಲ ಅವರು ಸಾವಿರಾರು ಕುಟುಂಬಗಳಿಗೆ ಊಟ, ಆಶ್ರಯ ನೀಡಿದವರು. ಕಲಾವಿದರನ್ನು ಪ್ರೋತ್ಸಾಹಿಸುವಲ್ಲಿಯೂ ಹೃದಯ ವೈಶಾಲ್ಯತೆ ತೋರಿದವರು’ ಎಂದು ರಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ ಹೇಳಿದರು.

ಸ್ಥಳೀಯ ಸ್ವಾಮಿ ವಿವೇಕಾನಂದ ಮಹಾವಿದ್ಯಾಲಯದ ಆವರಣದಲ್ಲಿ ಬೀಳಗಿ ಪಟ್ಟಣ ಸಹಕಾರ ಬ್ಯಾಂಕ ರಜತ ಮಹೋತ್ಸವದ ಅಂಗವಾಗಿ ಈಚೆಗೆ ಏರ್ಪಡಿಸಿದ  ‘ಅಮರ ಮಧುರ ಪ್ರೇಮ’ ಹಾಸ್ಯಭರಿತ ಕೌಟುಂಬಿಕ ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

‘ಬೀಳಗಿ ಪಟ್ಟಣ ಸಹಕಾರ ಬ್ಯಾಂಕ್ ರಾಜ್ಯಮಟ್ಟದಲ್ಲಿ ತನ್ನ ಅಂಗ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಹಲವಾರು ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ’ ಎಂದು ಬೀಳಗಿ ಪಟ್ಟಣ ಸಹಕಾರ ಬ್ಯಾಂಕ್ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ADVERTISEMENT

ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಲ್.ಬಿ.ಕುರ್ತಕೋಟಿ ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಸತ್ಯಪ್ಪ ಮೆಲ್ನಾಡ, ನಿರ್ದೇಶಕ ಎಂ.ಎನ್.ಪಾಟೀಲ, ಕಲಾವಿದ ಸುಂದರ, ಗೌರಮ್ಮ ಕೆಂಗಲಗುತ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.