
ಹುನಗುಂದ: ‘ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುವುದನ್ನು ಬಿಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ರೀತಿ ಘಟನೆಗಳು ನಡೆಯುತ್ತಿವೆ’ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಚೆಗೆ ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ನಡೆದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವುದು ಖಂಡನೀಯ. ಈ ಘಟನೆಯಲ್ಲಿ ಎಸ್ಪಿ ಹಾಗೂ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಸಮಾಜ ಘಾತುಕ ಶಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಅವರೆಲ್ಲರನ್ನು ಕೂಡಲೇ ಬಂಧಿಸಬೇಕು. ಇಂತಹ ಕೃತ್ಯಗಳಿಂದ ಹಿಂದೂ ಸಮಾಜವನ್ನು ಹೆದರಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಈ ದೇಶದ ಕಾನೂನು ಪಾಲಿಸಬೇಕು ಜೊತಗೆ ಗೌರವಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.