
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಜಿಲ್ಲೆಯಲ್ಲಿ ಗುರುವಾರ ನಾಲ್ವರು ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಬಾಗಲಕೋಟೆ ಶಹರ ಠಾಣೆ, ಇಳಕಲ್ ಗ್ರಾಮೀಣ, ತೇರದಾಳ ಹಾಗೂ ಬನಹಟ್ಟಿ ಠಾಣೆ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದೆ. ನಾಲ್ವರ ಆರೋಗ್ಯವೂ ಸ್ಥಿರವಾಗಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.
ನಾಲ್ಕು ಠಾಣೆಗಳನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಎರಡು ದಿನಗಳ ಕಾಲ ಪಕ್ಕದ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.