ಬಾಗಲಕೋಟೆ: ವಿವಿಧ ಕಂಪನಿಗಳಲ್ಲಿ ಠೇವಣಿ ಇಟ್ಟು ಮೋಸ ಹೋಗಿರುವ ಜನರಿಗೆ ಠೇವಣಿ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರ ಕುಟುಂಬದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
2019ರಲ್ಲಿ ಸಂಸತ್ತು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ ಅನ್ವಯ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆದರೆ, ಇಲ್ಲಿಯವರೆಗೆ ನ್ಯಾಯ ಕೊಡಿಸುವ ಕೆಲಸ ಆಗಿಲ್ಲ ಎಂದು ದೂರಿದರು.
ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಂಡಿದ್ದೇವೆ. ಠೇವಣಿದಾರರು ಹಾಗೂ ಏಜೆಂಟರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಣ ಹಿಂದಿರುಗಿಸಲು ಕ್ರಮಕೈಗೊಳ್ಳುವುದಾಗಿ ಪ್ರಧಾನಮಂತ್ರಿಯೇ ಭರವಸೆ ನೀಡಿದ್ದರು. ಇಂದಿಗೂ ಈಡೇರಿಲ್ಲ. ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅರ್ಜಿಗಳನ್ನು ತೆಗೆದುಕೊಂಡು ಹಲವು ವರ್ಷಗಳು ಕಳೆದಿದ್ದರೂ, ಯಾವುದೇ ಕ್ರಮ ಆಗಿಲ್ಲ. ಏಜೆಂಟರಿಗೆ ಭದ್ರತೆ, ಉದ್ಯೋಗ, ಪುನರ್‌ವಸತಿ ಕಲ್ಪಿಸಬೇಕು. ಮೋಸ ಮಾಡಿದವರಿಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.