ಬಾಗಲಕೋಟೆ: ವಿದ್ಯಾರ್ಥಿಗಳು ಸೇವೆಯ ಮಹತ್ವ ಅರಿತು ರಚನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಮಾಜ ಸೇವೆಗೆ ಮುಂದಾಗಬೇಕು ಎಂದು ಕಾಲೇಜು ಉಪವಿಭಾಗದ ಅಧ್ಯಕ್ಷ ಪಿ.ಆರ್.ಜೋಶಿ ಹೇಳಿದರು.
ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್. ಆರ್. ನರಸಾಪೂರ ಕಲಾ ಮತ್ತು ಎಂ.ಬಿ. ಶಿರೂರ ವಾಣಿಜ್ಯ ಕಾಲೇಜಿನ ದತ್ತು ಗ್ರಾಮ ಸೀಮಿಕೇರಿ ಲಡ್ಡು ಮುತ್ಯಾ ದೇವಸ್ಥಾನ ಆವರಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಮಾಜ ನೆರವು ಬಯಸಿದಾಗ ಸ್ವಯಂ ಸ್ಫೂರ್ತಿಯಿಂದ ಸೇವೆಗೆ ಮುಂದಾಗಬೇಕು. ನಿಸ್ವಾರ್ಥ ಸೇವೆಯಿಂದ ಮಾನಸಿಕ ನೆಮ್ಮದಿ ಪಡೆಯಬಹುದು. ಎನ್.ಎಸ್.ಎಸ್ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಾಸಕ್ಕೆ ಸಹಕಾರಿಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶ್ರೀನಿವಾಸ ನರಗುಂದ ಮಾತನಾಡಿ, ಸೇವೆ ಎಂಬುದು ನಾವು ಸಮಾಜಕ್ಕೆ ಮಾಡುವ ಉಪಕಾರವಲ್ಲ. ಅದು ಕರ್ತವ್ಯ ಎಂದು ಹೇಳಿದರು.
ಕಾರ್ಯಕ್ರಮಾಧಿಕಾರಿ ನಾಗರಾಜ ಹಸಬಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಜಿ ಗೌಡರ, ಐ.ಕ್ಯೂ.ಎ.ಸಿ ಸಂಯೋಜಕ ಎಚ್.ಎಸ್. ಗಿಡಗಂಟಿ, ಶಿಬಿರದ ವಿದ್ಯಾರ್ಥಿ ನಾಯಕ ಪೀರಸಾಬ್ ತಿಮ್ಮಸಾಗರ, ಸಂಗಯ್ಯ ಸಾರಂಗಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.