ADVERTISEMENT

ಬಾಗಲಕೋಟೆ: ಉಕ್ಕಿ ಹರಿದ ಘಟಪ್ರಭಾ, ಮಲಪ್ರಭಾ: ಗ್ರಾಮಗಳಿಗೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 6:11 IST
Last Updated 18 ಆಗಸ್ಟ್ 2020, 6:11 IST
ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ.
ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ.   

ಬಾಗಲಕೋಟೆ: ಜಿಲ್ಲೆಯಲ್ಲಿ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ.

ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಮಂಗಳವಾರ 21,964 ಕ್ಯೂಸೆಕ್ ನೀರು ಹರಿಸಲಾಗಿದೆ. ಇದರಿಂದ ಬಾದಾಮಿ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಾದ ಗೋವನಕೊಪ್ಪ, ಕಿತ್ತಲಿ, ಕರ್ಲಕೊಪ್ಪ, ಬೀರನೂರ ಗ್ರಾಮಗಳಿಗೆ ನೀರು ನುಗ್ಗಿದೆ.

ಗೋವನಕೊಪ್ಪ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಮನೆಗಳ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ADVERTISEMENT

ಮುಧೋಳ ತಾಲ್ಲೂಕಿನಲ್ಲಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ.

ಢವಳೇಶ್ವರ, ನಂದಗಾಂವ, ಹಳೇಚೆನ್ಹಾಳ ಗ್ರಾಮಗಳು ಜಲಾವೃತವಾಗಿವೆ. ಕಳೆದ ವರ್ಷ ಪ್ರವಾಹದಿಂದ ಸಂಪೂರ್ಣ ಮುಳುಗಡೆ ಆಗಿದ್ದ ನಂದಗಾಂವ ಗ್ರಾಮದ ನಿವಾಸಿಗಳನ್ನು ಜಿಲ್ಲಾಡಳಿತ ಮುಂಜಾಗರೂಕತಾ ಕ್ರಮವಾಗಿ ಸೋಮವಾರವೇ ಮಹಾಲಿಂಗಪುರ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿತ್ತು. ಹಳೇ ಚೆನ್ಹಾಳ ಗ್ರಾಮವನ್ನು ಖಾಲಿ ಮಾಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.