ಬಾಗಲಕೋಟೆ: ‘ರಾಜ್ಯ ಸರ್ಕಾರ ಡಿಸೆಂಬರ್ 31ರೊಳಗೆ ಪತನವಾಗಲಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕು ಗುಂಪುಗಳ ನಡುವೆ ಕಿತ್ತಾಟ ನಡೆದಿದೆ’ ಎಂದು ಸಂಸದ ಗೋವಿಂದ ಕಾರಜೋಳ ಮಂಗಳವಾರ ತಿಳಿಸಿದರು.
‘ಸಿ.ಎಂ ಸ್ಥಾನಕ್ಕೆ ಒಕ್ಕಲಿಗರು, ಲಿಂಗಾಯತರು, ದಲಿತರು ಮತ್ತು ಅಲ್ಪಸಂಖ್ಯಾತರು ಪಟ್ಟು ಹಿಡಿದಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಹಿರಿಯ ಶಾಸಕರಲ್ಲಿ ಅಸಮಾಧಾನವಿದೆ. ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಮನಸ್ಥಿತಿ ಶಾಸಕರಾದ ಬಿ.ಆರ್.ಪಾಟೀಲ, ಬಸವರಾಜ ರಾಯರೆಡ್ಡಿ, ಆರ್.ವಿ. ದೇಶಪಾಂಡೆ ಅವರಿಗಿದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.