ADVERTISEMENT

ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಶಾಸಕ ಜೆ.ಟಿ.ಪಾಟೀಲ

ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದುಕೊರತೆ ಸಭೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 5:23 IST
Last Updated 17 ಜನವರಿ 2026, 5:23 IST
ಬೀಳಗಿ ತಾಲ್ಲೂಕಿನ ಗಿರಿಸಾಗರದಲ್ಲಿ ಶುಕ್ರವಾರ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದುಕೊರತೆ ಸಭೆ ಉದ್ದೇಶಿಸಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿದರು
ಬೀಳಗಿ ತಾಲ್ಲೂಕಿನ ಗಿರಿಸಾಗರದಲ್ಲಿ ಶುಕ್ರವಾರ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದುಕೊರತೆ ಸಭೆ ಉದ್ದೇಶಿಸಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿದರು   

ಬೀಳಗಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಟೀಕಿಸುತ್ತಾರೆ. ಬಿಜೆಪಿಯವರೇ ಈ ಯೋಜನೆಗಳನ್ನು ಬಿಹಾರ, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಲ್ಲಿ ನಕಲು ಮಾಡಿದ್ದಾರೆ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.

ತಾಲ್ಲೂಕು ಪಂಚಾಯಿತಿ ಬೀಳಗಿ, ಬೀಳಗಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ, ಗ್ರಾಮ ಪಂಚಾಯಿತಿ ಕಾರ್ಯಾಲಯ ಗಿರಿಸಾಗರ ಇವರ ಆಶ್ರಯದಲ್ಲಿ ಶುಕ್ರವಾರ ಗಿರಿಸಾಗರ ಕಲ್ಯಾಣ ಹಿರೇಮಠದ ಸಭಾಭವನದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದುಕೊರತೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕ ₹60 ಸಾವಿರ ಕೋಟಿ ಅನುದಾನ ಒದಗಿಸುತ್ತಿದೆ. ಯೋಜನೆಗಳು ಮಹಿಳೆಯರು ಸ್ವಾಭಿಮಾನಿಯಾಗಿ ಬದುಕುವಂತೆ ಮಾಡಿವೆ ಎಂದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅನಿಲ ದಡ್ಡಿ ಮಾತನಾಡಿ, ನಾವು ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ನುಡಿದಂತೆ ನಡೆದುಕೊಂಡಿದ್ದೇವೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ ನಿತ್ಯ ನಿರಂತರವಾಗಿರುತ್ತವೆ ಎಂದರು.

ADVERTISEMENT

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕೆನ್ನುವ ಸದುದ್ದೇಶದಿಂದ ಗ್ರಾಮಮಟ್ಟದಲ್ಲಿ ಈ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತವ್ವ ಬಂಡಿವಡ್ಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾಖಂಡಕಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ನೆಮಿರಾಜ ದೇಸಾಯಿ, ಹನಮಂತ ಸೂಳಿಕೇರಿ, ರಸೂಲ್ ಮುಜಾವಾರ, ಶಿವಾನಂದ ಮಾದರ, ಎಂ. ಆರ್. ಪಾಟೀಲ, ಸದಾಶಿವ ಜುಂಜುರಿ, ನಾರಾಯಣ ಕಂಬಾರ, ವೆಂಕನಗೌಡ ಪಾಟೀಲ, ರೇಖಾ ಕಟ್ಟೆಪ್ಪನವರ, ರೂಪಾ ಹಿರೇಮಠ, ಚಂದ್ರಶೇಖರ ಪಂಡರಿ, ಶ್ರೀಕಾಂತ ಸಂದಿಮನಿ, ತಾಲ್ಲೂಕು ಪಂಚಾಯಿತಿ ಇಒ ಶ್ರೀನಿವಾಸ ಪಾಟೀಲ, ಸಿಡಿಪಿಒ ಬಿ.ಜಿ.ಕವಟೇಕರ, ಹೆಸ್ಕಾಂ ಅಧಿಕಾರಿ ಮಂಜುನಾಥ ಬೋಕಿ, ಆಹಾರ ಇಲಾಖೆಯ ಎ.ಎಲ್.ಸನದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.