ಜಮಖಂಡಿ: ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯುವ ಸಮುದಾಯಕ್ಕೆ ಒಳ್ಳೆಯ ಮಾರ್ಗದರ್ಶನ ಅವಶ್ಯಕವಾಗಿದೆ. ಮನೆಯಲ್ಲಿ ಪಾಲಕರು ಸಂಸ್ಕಾರ ಕಲಿಸಬೇಕು. ಮಕ್ಕಳ ಮೇಲೆ ಗಮನ ಹರಿಸಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಧೀಶೆ ಶ್ರೀದೇವಿ ನಾಯಕ ಹೇಳಿದರು.
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಎನ್.ಎಸ್.ಎಸ್.ಘಟಕ, ಇಕೋ ಕ್ಲಬ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.
ವಕೀಲ ಪ್ರವೀಣ ಕಮ್ಮಾರ ಮಾತನಾಡಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ನಶೆಮುಕ್ತ ಭಾರತ ಮಾಡಬೇಕಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಕಾನೂನು ಸರಿಯಾಗಿ ತಿಳಿದುಕೊಂಡು, ದುಶ್ಚಟಗಳಿಂದ ದೂರ ಇರಬೇಕು ಎಂದರು.
ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ, ಪ್ರಾಚಾರ್ಯ ಎಸ್.ಎಸ್.ಬಿರಾದಾರ ಇದ್ದರು. ಉಪನ್ಯಾಸಕಿ ಭವಾನಿ ಗುಗ್ಗರಿ ಪ್ರಾರ್ಥಿಸಿದರು. ಸಿ,ಎಸ್,ಜನಗೊಂಡ ಸ್ವಾಗತಿಸಿದರು, ಎಲ್.ಕೆ. ಗವಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಎಸ್.ಭಾಗೊಜಿ ಪರಿಚಯಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.