ಗುಳೇದಗುಡ್ಡ: ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯನ್ನು ಚುನಾವಣಾಧಿಕಾರಿಗಳಾಗಿರುವ ತಹಶೀಲ್ದಾರ್ ಮಂಗಳಾ ಎಂ. ಅವರು ಶುಕ್ರವಾರ ಚುನಾವಣೆಯ ವೇಳಾಪಟ್ಟಿ ನಿಗದಿಪಡಿಸಿ, ಪುರಸಭೆಯ ಎಲ್ಲ 23 ಚುನಾಯಿತ ಸದಸ್ಯರಿಗೆ 7 ದಿನ ಮುಂಚಿತವಾಗಿ ತಿಳಿವಳಿಕೆ ಪತ್ರ ರವಾನಿಸಿದ್ದಾರೆ.
ಆ.30ರಂದು ಚುನಾವಣೆ ಜರುಗಲಿದೆ. ಪುರಸಭೆ ಕಾರ್ಯಾಲಯದ ಕಟ್ಟಡ ಕಾಮಗಾರಿ ನಡೆದಿರುವುದರಿಂದ ಚುನಾವಣೆ ಪ್ರಕ್ರಿಯೆ ಗುಳೇದಗುಡ್ಡ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆಯಲಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಸ್ಥಾನಕ್ಕೆ ನಿಗದಿಯಾಗಿದೆ.
ಆ.30ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12ರ ವರೆಗೆ ನಾಮಪತ್ರ ಸಲ್ಲಿಸಲು ಸಮಯ ನೀಡಲಾಗಿದೆ. ಮಧ್ಯಾಹ್ನ 2 ಗಂಟೆಗೆ ಸಭೆ ಪ್ರಾರಂಭವಾದ ತಕ್ಷಣ ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ. ನಾಮಪತ್ರಗಳನ್ನು ಹಿಂಪಡೆಯಲು, ನಾಮಪತ್ರಗಳ ಪರಿಶೀಲನೆ ನಂತರ 10 ನಿಮಿಷ್ ಕಾಲಾವಕಾಶ ನೀಡಲಾಗುತ್ತದೆ. ನಂತರ ಮಧ್ಯಾಹ್ನ 2.11 ಗಂಟೆಗೆ ಮೊದಲು ಅಧ್ಯಕ್ಷರ ಚುನಾವಣೆ ನಂತರ ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ ಎಂದು ಅವರು ತಹಶೀಲ್ದಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.